alex Certify BIG BREAKING: ಒಂದೇ ದಿನದಲ್ಲಿ ಮತ್ತೆ 20,500ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 143449 ಸಕ್ರಿಯ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 20,500ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 143449 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,528 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗಿಂತ ಕುಸಿತವಾಗಿದ್ದು, 24 ಗಂಟೆಯಲ್ಲಿ 49 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 525709 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 143449 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 17790 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 43081441 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 25,59,840 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,99,98,89,097 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,92,569 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...