ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,800 ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ. ಅಂದರೆ ಒಂದೇ ದಿನದಲ್ಲಿ 2,841 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 9 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,190ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 18,604 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,295 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,73,460 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 14,03,220 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,90,99,44,803 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,86,628 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.