alex Certify BIG BREAKING: ಒಂದೇ ದಿನದಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 3,116 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 47 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 515803ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 38069 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 5559 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42437072 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 20,31,275 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,80,13,23,547 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 7,61,737 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...