alex Certify BIG BREAKING: ಒಂದೇ ದಿನದಲ್ಲಿ ಮತ್ತೆ 30,256 ಜನರಲ್ಲಿ ಕೋವಿಡ್ ಪಾಸಿಟಿವ್; ಸಾವಿನ ಸಂಖ್ಯೆ 4,45,133 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 30,256 ಜನರಲ್ಲಿ ಕೋವಿಡ್ ಪಾಸಿಟಿವ್; ಸಾವಿನ ಸಂಖ್ಯೆ 4,45,133 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 30,256 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 33,478,419ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 295 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 445133 ಕ್ಕೆ ಏರಿಕೆಯಾಗಿದೆ.

’ಇ-ಶ್ರಮ’ ವೆಬ್‌ಸೈಟ್‌ನಲ್ಲಿ ಪ್ರವಾಹೋಪಾದಿಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ…!

ಇನ್ನು ದೇಶದಲ್ಲಿ 318181 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 43938 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32715105 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,77,607 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 37,78,296 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 80,85,68,144 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...