alex Certify BIG BREAKING: ಒಂದೇ ದಿನದಲ್ಲಿ ಮತ್ತೆ 3,300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 3,300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3,377 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 60 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,23,753 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 17,801 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,496 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,30,622 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 22,80,743 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,88,65,46,894 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,73,635 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...