BIG BREAKING: ಒಂದೇ ದಿನದಲ್ಲಿ ಮತ್ತೆ 4 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ 20-09-2022 9:29AM IST / No Comments / Posted In: India, Featured News, Live News ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದೆಯಾದರೂ ಒಂದೇ ದಿನದಲ್ಲಿ ಮತ್ತೆ ನಾಲ್ಕು ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 4,043 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,370 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 47,379 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,67,340 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 13,10,410 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,16,83,24,537 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,95,894 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. #COVID19 | India reports 4,043 fresh cases and 4,676 recoveries in the last 24 hours. Active cases 47,379Daily positivity rate 1.37% pic.twitter.com/4KLaogaQtC — ANI (@ANI) September 20, 2022