alex Certify BIG BREAKING: ಒಂದೇ ದಿನದಲ್ಲಿ ಮತ್ತೆ 4000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ ಮಹಾಮಾರಿಗೆ 104 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 4000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ ಮಹಾಮಾರಿಗೆ 104 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 4,184 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 104 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 515459 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 44488 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6554 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42420120 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 18,23,329 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,79,53,95,649 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 8,73,974 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...