alex Certify BIG BREAKING: ಒಂದೇ ದಿನದಲ್ಲಿ ಮತ್ತೆ 42,766 ಜನರಲ್ಲಿ ಕೋವಿಡ್ ಪಾಸಿಟಿವ್; ದಿನದಿಂದ ದಿನಕ್ಕೆ ಹೆಚ್ಚುತ್ತಿದೆ 3ನೇ ಅಲೆ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 42,766 ಜನರಲ್ಲಿ ಕೋವಿಡ್ ಪಾಸಿಟಿವ್; ದಿನದಿಂದ ದಿನಕ್ಕೆ ಹೆಚ್ಚುತ್ತಿದೆ 3ನೇ ಅಲೆ ಆತಂಕ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 42,766 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 308 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 440533 ಕ್ಕೆ ಏರಿಕೆಯಾಗಿದೆ.

ʼಚಿನ್ನದ ಹುಡುಗʼ ನೀರಜ್​ ಚೋಪ್ರಾ ಸಂದರ್ಶನದ ವೇಳೆ ಎದುರಾಯ್ತು ಮುಜುಗರದ ಪ್ರಶ್ನೆ

ಇನ್ನು ದೇಶದಲ್ಲಿ 410048 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 38091 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32138092 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,47,476 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 71,61,760 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 68,46,69,521 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...