alex Certify BIG BREAKING: ಒಂದೇ ದಿನದಲ್ಲಿ ಮತ್ತೆ 8,309 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 8,309 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದೆ. ಆದರೆ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಆರಂಭವಾಗಿದೆ. ಈ ನಡುವೆ ಕಳೆದ 24 ಗಂಟೆಯಲ್ಲಿ ಮತ್ತೆ 8,309 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆಯಾಗಿದ್ದು ಒಂದೇ ದಿನದಲ್ಲಿ 236 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 468790 ಕ್ಕೆ ಏರಿಕೆಯಾಗಿದೆ.

ಅಮೆಜಾನ್ ಪ್ರೈಮ್ ಗ್ರಾಹಕರಿಗೆ ಬಿಗ್ ಶಾಕ್: ಸದಸ್ಯತ್ವ ಶುಲ್ಕ ಶೇ.50 ರಷ್ಟು ಏರಿಕೆ

ಇನ್ನು ದೇಶದಲ್ಲಿ 103859 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9905 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34008183 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 7,62,268 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 42,04,171 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,22,41,68,929 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...