ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,454 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಭಾರತ ಲಸಿಕಾ ಅಭಿಯಾನದಲ್ಲಿ ಹೊಸ ದಾಖಲೆ ಬರೆದಿದ್ದು, 100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿಕೆ ಪೂರ್ಣಗೊಳಿಸಿದೆ.
ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, 24 ಗಂಟೆಯಲ್ಲಿ 160 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,52,811ಕ್ಕೆ ಏರಿಕೆಯಾಗಿದೆ.
SHOCKING NEWS: ಹರಕೆ ತೀರಿಸಲು 600 ಮೆಟ್ಟಿಲು ಹತ್ತಿದ ಭಕ್ತ; ದೇವರ ದರ್ಶನ ಪಡೆದು ಹೊರ ಬರುತ್ತಿದ್ದಂತೆಯೇ ಕೊನೆಯುಸಿರೆಳೆದ
ಇನ್ನು ದೇಶದಲ್ಲಿ 178831 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 17561 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33495808 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 12,47,506 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 48,08,665 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 99,85,38,075 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.