alex Certify BIG BREAKING: ಒಂದೇ ದಿನದಲ್ಲಿ 2,827 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 19,067 ಸಕ್ರಿಯ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 2,827 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 19,067 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,827 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 24 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,181 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 19067 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,230 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,70,165 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 14,85,292 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,90,83,96,788 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,71,276 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...