alex Certify BIG BREAKING: ಒಂದೇ ದಿನದಲ್ಲಿ 3,324 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 19,092 ಸಕ್ರಿಯ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 3,324 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; 19,092 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದ್ದು, ಕಳೆದ 24 ಗಂಟೆಯಲ್ಲಿ 3,324 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ನಿನ್ನೆಗಿಂತ ಕುಸಿತವಾಗಿದ್ದು, 24 ಗಂಟೆಯಲ್ಲಿ 40 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,23,843ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 19,092 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,876 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,36,253 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 25,95,267 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,89,17,69,346 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,71,087 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...