alex Certify BIG BREAKING: ಒಂದೇ ದಿನದಲ್ಲಿ 3,545 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢ; 19,688 ಸಕ್ರಿಯ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 3,545 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢ; 19,688 ಸಕ್ರಿಯ ಪ್ರಕರಣ ದಾಖಲು

ವದೆಹಲಿ: ದೇಶದಲ್ಲಿ ಕೊರೊನಾ 4ನೇ ಅಲೆ ಆತಂಕದ ನಡುವೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,545 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 27 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,002 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 19,688 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,549 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,51,248 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 16,59,843 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,89,81,52,695 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,65,918 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...