alex Certify BIG BREAKING: ಒಂದೇ ದಿನದಲ್ಲಿ 3,998 ಜನರು ಕೋವಿಡ್ ಗೆ ಬಲಿ; 24 ಗಂಟೆಯಲ್ಲಿ ದಿಢೀರ್ ಏರಿಕೆಯಾಯ್ತು ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 3,998 ಜನರು ಕೋವಿಡ್ ಗೆ ಬಲಿ; 24 ಗಂಟೆಯಲ್ಲಿ ದಿಢೀರ್ ಏರಿಕೆಯಾಯ್ತು ಸೋಂಕಿತರ ಸಂಖ್ಯೆ

ನವದೆಹಲಿ: ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 42,015 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,12,16,337ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,998 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 418480ಕ್ಕೆ ಏರಿಕೆಯಾಗಿದೆ.

ಕಿಸಾನ್ ಸಮ್ಮಾನ್ ಯೋಜನೆ: ಖಾತೆಗೆ ಹಣ ಹಾಕಿಸಿಕೊಂಡ ಅನರ್ಹ ರೈತರಿಗೆ ಬಿಗ್ ಶಾಕ್

ಇನ್ನು ದೇಶದಲ್ಲಿ 407170 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 36977 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30390687 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 18,52,140 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಕಳೆದ 24ಗಂಟೆಯಲ್ಲಿ 34,25,446 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 41,54,72,455 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...