ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 5,443 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,429 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 46,342 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,78,271 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 15,85,343 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,17,11,36,934 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,39,062 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.