alex Certify BIG BREAKING: ಒಂದೇ ದಿನ 6,650 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿದೆ 77,516 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನ 6,650 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ದೇಶದಲ್ಲಿದೆ 77,516 ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,650 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು ಒಂದೇ ದಿನದಲ್ಲಿ 24 ಗಂಟೆಯಲ್ಲಿ 374 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 479133 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 77516 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7051 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34215977 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,65,887 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 57,44,652 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,40,31,63,063 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...