alex Certify BIG BREAKING: ಒಂದೇ ದಿನ ಮತ್ತೆ 18,833 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 2,46,687 ಕೋವಿಡ್ ಸಕ್ರಿಯ ಪ್ರಕರಣಗಳು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನ ಮತ್ತೆ 18,833 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 2,46,687 ಕೋವಿಡ್ ಸಕ್ರಿಯ ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 18,833 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 278 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 449538 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 2,46,687 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 24770 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33175656 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,09,825 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 59,48,360 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 92,17,65,405 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...