
ದೇಶದಲ್ಲಿ ಈವರೆಗೆ 5,28,150 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 47,945 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,19,264 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 17,81,723 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,14,95,36,744 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,20,784 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.