ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಭೆ ನಡೆದಿದ್ದು, ಓಮಿಕ್ರಾನ್ ತಡೆಯಲು ತಜ್ಞರು ಮಹತ್ವದ ಶಿಫಾರಸು ಮಾಡಿದ್ದಾರೆ.
ವಿಧಾನಸೌಧದಲ್ಲಿ ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯದಲ್ಲಿ ಒಮಿಕ್ರಾನ್ ತಡೆಯಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ರಾಜ್ಯ ಸರ್ಕಾರಕ್ಕೆ ಹಲವು ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ಒಮಿಕ್ರಾನ್ ಪತ್ತೆಯಾದ ದೇಶಗಳಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಬೇಕು. ವಿದೇಶಿ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಗುಂಡೇಟಿಗೆ ಕೇರಳ ಮೂಲದ ಯುವತಿ ಬಲಿ..! ಕಳೆದ 2 ತಿಂಗಳಲ್ಲಿ ಅಮೆರಿಕದಲ್ಲಿ ಮೂರನೇ ಭಾರತೀಯ ಸಾವು
ಮಂಗಳೂರು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಟೆಸ್ಟಿಂಗ್, ಟ್ರ್ಯಾಕಿಂಗ್ ಹೆಚ್ಚಿಸಬೇಕು. ಎಲ್ಲರಿಗೂ ವ್ಯಾಕ್ಸಿನ್ ಕಡ್ಡಾಯಗೊಳಿಸಬೇಕು.
ಏರ್ ಪೋರ್ಟ್, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ವ್ಯಾಕ್ಸಿನ್, ವಿಶೇಷವಾಗಿ ಸರ್ಕಾರಿ ಸೌಲಭ್ಯಗಳಿಗೂ ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ವಾರಕ್ಕೆ ಕನಿಷ್ಠ ಶೇ.5 ಮಕ್ಕಳಿಗೆ ಕೋವಿಡ್ ಪರೀಕ್ಷೆ, ಶಿಕ್ಷಕರಿಗೆ ಕಡ್ಡಾಯ ಲಸಿಕೆ, ಆನ್ ಲೈನ್, ಆಫ್ ಲೈನ್ ಎರಡೂ ರೀತಿಯಲ್ಲಿ ತರಗತಿ, ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಅತಿಥಿಗಳಿಗೆ ಮಿತಿ, ವದಂತಿ ಹಬ್ಬಿಸುವವರ ವಿರುದ್ಧ ಕ್ರಮ ಸೇರಿದಂತೆ ಒಟ್ಟು 13 ಅಂಶಗಳ ಕುರಿತು ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ
ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ಸುದರ್ಶನ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.