alex Certify BIG BREAKING: ಒಮಿಕ್ರಾನ್ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಮಿಕ್ರಾನ್ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….?

ನವದೆಹಲಿ: ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 5,784 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 252 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 475888 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 88993 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7995 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 475888 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,90,482 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 66,98,601 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,33,88,12,577 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...