ಕೊರೊನಾ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳುವಂತೆ ಒತ್ತಡ ಹೇರುತ್ತಿರುವುದರ ಕುರಿತು ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ಈ ಕುರಿತಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ.
ಕೊರೊನಾ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳುವಂತೆ ಯಾರಿಗೂ ಬಲವಂತ ಮಾಡುವುದು ಸಲ್ಲದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಕೊರೊನಾ ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸ್ಥಳ ಪ್ರವೇಶಿಸಲು ನಿರ್ಬಂಧವೂ ಇದ್ದ ಕಾರಣ ಇದನ್ನು ಪ್ರಶ್ನಿಸಿ ಮೊದಲಿಗೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು.
ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್, ಸರ್ಕಾರದ ಕಡ್ಡಾಯ ಕೊರೊನಾ ಲಸಿಕೆ ತೀರ್ಮಾನ ಸರಿ ಇದೆ ಎಂದು ಹೇಳಿತ್ತು. ಆದರೆ ಇದನ್ನು ಪ್ರಶ್ನಿಸಿ ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿತ್ತು.
ಇದೀಗ ಸುಪ್ರೀಂ ಕೋರ್ಟ್ ತೀರ್ಪು ಹೊರ ಬಿದ್ದಿದ್ದು, ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಲವಂತ ಮಾಡಬಾರದು ಎಂದು ಹೇಳಿದೆ. ಆದರೆ ಸರ್ಕಾರದ ಈ ಹಿಂದಿನ ತೀರ್ಮಾನ ಸಕಾರಣವಿಲ್ಲದೆ ಮಾಡಲಾಗಿದೆ ಎಂಬುದನ್ನೂ ಹೇಳಲಾಗುವುದಿಲ್ಲವೆಂದು ತಿಳಿಸಿದೆ.