ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಮತ್ತೋರ್ವ ವ್ಯಕ್ತಿಯಲ್ಲಿ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ.
ದಕ್ಷಿಣ ಆಫ್ರಿಕಾದಿಂದ ಬಂದಿರುವ 34 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದ್ದು, ಸೋಂಕಿತರನ್ನು ಐಸೋಲೇಷನ್ ಮಾಡಲಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಐವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 15 ಜನರ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಟೆಸ್ಟ್ ಗೆ ಕಳುಹಿಸಲಾಗಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.