ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ ಕಂಡುಬಂದಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 18,346 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದು ಕಳೆದ 209 ದಿನಗಳಲ್ಲೇ ಅತಿ ಕಡಿಮೆ ಸಂಖ್ಯೆಯ ಕೋವಿಡ್ ಪ್ರಕರಣವಾಗಿದೆ.
ಆದರೆ ಸಾವಿನ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 263 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 449260 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2,52902 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 29639 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33150886 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 11,41,642 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 72,51,419 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 91,54,65,826 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.