alex Certify BIG BREAKING: ಕಳೆದ 538 ದಿನಗಳಲ್ಲೇ ಅತಿ ಕಡಿಮೆ ಕೋವಿಡ್ ಸೋಂಕಿತರು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಳೆದ 538 ದಿನಗಳಲ್ಲೇ ಅತಿ ಕಡಿಮೆ ಕೋವಿಡ್ ಸೋಂಕಿತರು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಭಾರಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 8,488 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 538 ದಿನಗಳಲ್ಲೇ ಪತ್ತೆಯಾದ ಅತಿ ಕಡಿಮೆ ಸೋಂಕಿತರ ಸಂಖ್ಯೆಯಾಗಿದೆ.

ಇನ್ನು ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 249 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 465911 ಕ್ಕೆ ಏರಿಕೆಯಾಗಿದೆ.

ಗುಡ್ ನ್ಯೂಸ್: ರೈತರಿಗೆ ಸ್ಮಾರ್ಟ್ಫೋನ್ ಖರೀದಿಗೆ ಹಣ ನೀಡಲು ನಿರ್ಧಾರ, ಅನ್ನದಾತರಿಗೆ ಗುಜರಾತ್ ಸರ್ಕಾರದ ಕೊಡುಗೆ

ಇನ್ನು ದೇಶದಲ್ಲಿ 118443 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 12510 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33934547 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 7,83,567 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 32,99,337 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,16,87,28,385 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...