ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಅಮರಿಂದರ್ ಸಿಂಗ್, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಹೊರಬಂದ ಬೆನ್ನಲ್ಲೇ ’ಪಂಜಾಬ್ ಲೋಕ್ ಕಾಂಗ್ರೆಸ್’ ಎಂಬ ಹೊಸ ಪಕ್ಷ ಸ್ಥಾಪಿಸುತ್ತಿರುವುದಾಗಿ ನೂತನ ಪಕ್ಷದ ಹೆಸರನ್ನು ಘೋಷಣೆ ಮಾಡಿದ್ದಾರೆ.