ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಮಾತನಾಡಿದ್ದೇನೆ. ಕಾಂಗ್ರೆಸ್ ಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಟಿಕೆಟ್ ನೀಡುವ ಭರವಸೆ ಕೂಡ ನೀಡಿದ್ದಾರೆ ಎಂದರು.
ಕಾಂಗ್ರೆಸ್ ನಲ್ಲಿ ಬಣ ರಾಜಕೀಯವಿಲ್ಲ, ಒಗ್ಗಟ್ಟಿದೆ. ಅಭಿಮಾನಿಗಳಲ್ಲಿ ಬಣ ಮಾಡಿಕೊಂಡಿರಬಹುದು. ಆದರೆ ನಾಯಕರಲ್ಲಿ ಬಣ ರಾಜಕೀಯವಿಲ್ಲ. ಒಗ್ಗಟ್ಟಿನಿಂದಿದ್ದಾರೆ. ಹಾಗಾಗಿ ಕಾಂಗ್ರೆಸ್ ಸೇರುವ ಬಗ್ಗೆ ಚಿಂತನೆ ಮಾಡಿದ್ದೇನೆ ಎಂದರು.
ಆತ್ಮಹತ್ಯೆಗೆ ಮುಂದಾದ ವ್ಯಕ್ತಿ ಖಾಸಗಿ ಅಂಗ ಕತ್ತರಿಸಿಕೊಂಡ…..! ಮುಂದೆನಾಯ್ತು ಗೊತ್ತಾ….?
ಕಾಂಗ್ರೆಸ್ ಗೆ ನಾನು ಬಂದರೆ ಚಾಮುಂಡೇಶ್ವರಿ ಕ್ಷೇತ್ರದಿಂದ ತಾವು ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನನಗೆ ಹಾಗೂ ನನ್ನ ಮಗ ಇಬ್ಬರಿಗೂ ಕಾಂಗ್ರೆಸ್ ಟಿಕೆಟ್ ಕೇಳಿದ್ದೇನೆ. ಇಬ್ಬರಿಗೂ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
ಇದೇ ವೇಳೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರವಾಗಿ ಮಾತನಾಡಿದ ಜಿ.ಟಿ.ಡಿ, ಚುನಾವಣೆಗೆ ಹೋಗುವುದೋ ಬಿಡುವುದೋ ನಿರ್ಧರಿಸಿಲ್ಲ. ಮೈಸೂರಿನಲ್ಲಿ ಕೆಲವರ ಸಹವಾಸ ಬಿಡಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ.