alex Certify BIG BREAKING: ಕಾಂಗ್ರೆಸ್ ನಿಂದ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅಮಾನತು; ಸಲೀಂ ಉಚ್ಛಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾಂಗ್ರೆಸ್ ನಿಂದ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅಮಾನತು; ಸಲೀಂ ಉಚ್ಛಾಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಕೆಪಿಸಿಸಿ ವೇದಿಕೆಯಲ್ಲಿಯೇ ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಪಡೆದುಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಿದ್ದರು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಲೆಕ್ಷನ್ ಪಡೆದುಕೊಳ್ಳುತ್ತಿರುವ ಬಗ್ಗೆ ಆರೋಪಿಸಿ ಡಿಕೆಶಿ ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದರು. ಪಕ್ಷದ ಅಧ್ಯಕ್ಷರ ವಿರುದ್ಧವೇ ಕಾಂಗ್ರೆಸ್ ನಾಯಕರ ಈ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತಲ್ಲದೇ ಆಡಳಿತ ಪಕ್ಷ ಬಿಜೆಪಿ ನಾಯಕರ ಕಟುಟೀಕೆಗಳಿಗೂ ಕಾರಣವಾಗಿತ್ತು.

ದುಡ್ಡಿಲ್ಲದ ಮನೆಗೆ ಬೀಗ ಹಾಕಬೇಕೇ…? ಕನ್ನ ಕೊರೆದ ಮನೆಯಲ್ಲಿ ಏನೂ ಸಿಗದ ಹತಾಶೆಯಲ್ಲಿ ಪತ್ರ ಬರೆದಿಟ್ಟ ಹೋದ ಕಳ್ಳ…!

ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಉಭಯ ನಾಯಕರ ವಿರುದ್ಧ ಕ್ರಮ ಕೈಗೊಂಡಿದ್ದು, ಸಲೀಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆಗೊಳಿಸಿದ್ದರೆ, ವಿ.ಎಸ್. ಉಗ್ರಪ್ಪ ಅವರನ್ನು ಕಾಂಗ್ರೆಸ್ ನಿಂದಲೇ ಅಮಾನತುಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...