alex Certify BIG BREAKING: ಕಾಂಗ್ರೆಸ್ ಪಾದಯಾತ್ರೆ ಮುಂದೂಡಲು ನಿರ್ಧಾರ; ಐದೇ ದಿನಕ್ಕೆ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾಂಗ್ರೆಸ್ ಪಾದಯಾತ್ರೆ ಮುಂದೂಡಲು ನಿರ್ಧಾರ; ಐದೇ ದಿನಕ್ಕೆ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆ

ರಾಮನಗರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಬ್ರೇಕ್ ಹಾಕಲು ಹೈಕಮಾಂಡ್ ಸೂಚಿಸಿದ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.

ಹೈಕೋರ್ಟ್ ನೋಟೀಸ್, ರಾಜ್ಯ ಸರ್ಕಾರದ ಎಚ್ಚರಿಕೆ, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ, ಕೊರೊನಾ ಸೋಂಕು ಕಡಿಮೆಯಾದ ಬಳಿಕ ಪಾದಯಾತ್ರೆಯನ್ನು ಮತ್ತೆ ಮುಂದುವರಿಸೋದು, ಸಧ್ಯಕ್ಕೆ ಪಾದಯಾತ್ರೆ ಮೊಟಕುಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಉದ್ದೇಶ ಜನರಿಗೆ ಮನವರಿಕೆಯಾಗಿದೆ. ನ್ಯಾಯಾಂಗವನ್ನು ನಾವು ಗೌರವಿಸಬೇಕು. ಪಾದಯಾತ್ರೆ ಪ್ರತಿಷ್ಠೆಯ ಪ್ರಶ್ನೆಯಲ್ಲ, ಪಕ್ಷದ ಬಗ್ಗೆ ಜನಾಭಿಪ್ರಾಯ ದೊಡ್ಡದು. ಜನರ ಹಿತ ಕಾಯುವುದು ನಮ್ಮ ಕರ್ತವ್ಯ. ಅರ್ಧದಲ್ಲಿ ಪಾದಯಾತ್ರೆ ನಿಲ್ಲಿಸಿದರೆ ಪ್ರತಿಷ್ಠೆಗೆ ಕೊಂಚ ಅಡ್ಡಿಯಾಗಬಹುದು. ಆದರೆ ಪಕ್ಷಕ್ಕೆ ಮುಜುಗರವಾಗುವುದನ್ನು ತಡೆಯಬಹುದು. ಜನರ ಅಭಿಪ್ರಾಯ, ನ್ಯಾಯಾಂಗದ ಸೂಚನೆಗೆ ಗೌರವ ನೀಡುವುದು ನಮ್ಮ ಕರ್ತವ್ಯ. ಹಾಗಾಗಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿ, ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಪ್ರಾರಂಭಿಸೋಣ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಆದರೆ ಈ ವೇಳೆ ಮೌನಕ್ಕೆ ಶರಣಾಗಿರುವ ಡಿ.ಕೆ.ಶಿವಕುಮಾರ್, ಪಾದಯಾತ್ರೆ ಮುಂದುವರೆಸುವ ಬಗ್ಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಪಾದಯಾತ್ರೆಗೆ ಯು.ಟಿ.ಖಾದರ್ ಸೇರಿದಂತೆ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದರೆ ಇನ್ನು ಕೆಲ ನಾಯಕರು ಕೋವಿಡ್ ನಿಯಮ ಪಾಲಿಸಿಕೊಂಡು ಕೆಲವರು ಮಾತ್ರ ಪಾದಯಾತ್ರೆ ಮುಂದುವರೆಸೋಣ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಒಟ್ಟಾರೆ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ಆರಂಭಿಸಿದ್ದ ಬೃಹತ್ ಪಾದಯಾತ್ರೆ ಕೋವಿಡ್ ಕಾರಣದಿಂದ ಕೇವಲ 5 ದಿನಕ್ಕೆ ಅಂತ್ಯವಾದಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...