
ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದೆ. ಶಿಕ್ಷಣ ಸಂಸ್ಥೆಯೊಂದರ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, ಇದರಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಫ್ಘಾನಿಸ್ತಾನದಲ್ಲಿ ಶುಕ್ರವಾರದಂದು ಸಾಮಾನ್ಯವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗುತ್ತಿದ್ದು, ಆದರೆ ಪರೀಕ್ಷೆಗಳಿದ್ದ ಕಾರಣ ಕಾರ್ಯನಿರ್ವಹಿಸುತ್ತಿತ್ತು ಎಂದು ಹೇಳಲಾಗಿದೆ. ಪ್ರವೇಶ ಪರೀಕ್ಷೆಗಾಗಿ ವಿದ್ಯಾರ್ಥಿಗಳು ಇಲ್ಲಿ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.
ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಗುರಿಯಾಗಿಸಿಕೊಂಡು ಈ ಬಾಂಬ್ ಬ್ಲಾಸ್ಟ್ ನಡೆದಿದ್ದು, ಉಗ್ರರ ಕೃತ್ಯವನ್ನು ಎಲ್ಲರೂ ಖಂಡಿಸಿದ್ದಾರೆ. ಮತ್ತಷ್ಟು ದಾಳಿಗಳು ನಡೆಯಬಹುದು ಎಂಬ ಶಂಕೆಯಿಂದ ಅಫ್ಘಾನಿಸ್ತಾನದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.