alex Certify BIG BREAKING: ಕಾಬೂಲ್ ನಲ್ಲಿ ಬಾಂಬ್ ಸ್ಫೋಟ; 19ಕ್ಕೂ ಅಧಿಕ ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾಬೂಲ್ ನಲ್ಲಿ ಬಾಂಬ್ ಸ್ಫೋಟ; 19ಕ್ಕೂ ಅಧಿಕ ಮಂದಿ ಸಾವು

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದೆ. ಶಿಕ್ಷಣ ಸಂಸ್ಥೆಯೊಂದರ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, ಇದರಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ಶುಕ್ರವಾರದಂದು ಸಾಮಾನ್ಯವಾಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗುತ್ತಿದ್ದು, ಆದರೆ ಪರೀಕ್ಷೆಗಳಿದ್ದ ಕಾರಣ ಕಾರ್ಯನಿರ್ವಹಿಸುತ್ತಿತ್ತು ಎಂದು ಹೇಳಲಾಗಿದೆ. ಪ್ರವೇಶ ಪರೀಕ್ಷೆಗಾಗಿ ವಿದ್ಯಾರ್ಥಿಗಳು ಇಲ್ಲಿ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಗುರಿಯಾಗಿಸಿಕೊಂಡು ಈ ಬಾಂಬ್ ಬ್ಲಾಸ್ಟ್ ನಡೆದಿದ್ದು, ಉಗ್ರರ ಕೃತ್ಯವನ್ನು ಎಲ್ಲರೂ ಖಂಡಿಸಿದ್ದಾರೆ. ಮತ್ತಷ್ಟು ದಾಳಿಗಳು ನಡೆಯಬಹುದು ಎಂಬ ಶಂಕೆಯಿಂದ ಅಫ್ಘಾನಿಸ್ತಾನದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...