ಇಸ್ಲಾಮಾಬಾದ್: ಗೂಢಚಾರಿಕೆ ಆರೋಪದ ಮೇರೆಗೆ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾದವ್ ಗೆ ಮೇಲ್ಮನವಿ ಸಲ್ಲಿಸಲು ಪಾಕ್ ಸಂಸತ್ ಅವಕಾಶ ನೀಡಿದೆ. ಈ ಮೂಲಕ ಕುಲಭೂಷಣ್ ಜಾದವ್ ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಈ ಸಂಬಂಧ ಪಾಕಿಸ್ತಾನ ಸಂಸತ್ ನಲ್ಲಿ ಮಸೂದೆ ಅಂಗೀಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಾಕ್ ಮಿಲಿಟರಿ ಕೋರ್ಟ್ ನೀಡಿದ ಗಲ್ಲು ಶಿಕ್ಷೆ ತೀರ್ಪು ಪುನರ್ ಪರಿಶೀಲಿಸುವಂತೆ ಕೋರಿ ಕುಲಭೂಷಣ್ ಜಾದವ್ ಅರ್ಜಿ ಸಲ್ಲಿಸಬಹುದಾಗಿದೆ.
ಪಾಕಿಸ್ತಾನದಲ್ಲಿ ಗೂಢಚರ್ಯೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಲಭೂಷಣ್ ಜಾದವ್ ಅವರನ್ನು ಪಾಕ್ ಸೇನೆ ಬಲೂಚಿಸ್ತಾನದಲ್ಲಿ ಬಂಧಿಸಿತ್ತು. ಪ್ರಕರಣ ಸಂಬಂಧ ಪಾಕಿಸ್ತಾನ ಸೇನಾ ನ್ಯಾಯಾಲಯ ಕುಲಭೂಷಣ್ ಅವರಿಗೆ ಗಲ್ಲುಶಿಕ್ಷೆ ವಿಧಿಸಿತ್ತು.
ಕುಲಭೂಷಣ್ ಜಾದವ್ ಗೆ ರಾಜತಾಂತ್ರಿಕ ನೆರವು ನಿರಾಕರಿಸಿದ್ದಕ್ಕಾಗಿ ಹಾಗೂ ಗಲ್ಲುಶಿಕ್ಷೆ ಪ್ರಶ್ನಿಸಿ ಐಸಿಜೆ ಮೊರೆ ಹೋಗಿದ್ದ ಭಾರತಕ್ಕೆ ರಾಜತಾಂತ್ರಿಕ ನೆರವಿಗೆ ಅವಕಾಶ ಮಾಡಿಕೊಡಲಾಗಿತ್ತು. ಐಸಿಜೆ ತೀರ್ಪು ಪಾಲಿಸಿ ಈಗ ಜಾದವ್ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ.