ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಡಿ ಕೇಸ್ ನಲ್ಲಿ ಜಾಮೀನು ಮುಂದುವರೆಸಿ ಕೋರ್ಟ್ ಆದೇಶ ಹೊರಡಿಸಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಷರತ್ತುಬದ್ಧ ಜಾಮೀನು ಮುಂದುವರೆಸಿ ಆದೇಶ ಹೊರಡಿಸಿದೆ.
ಆರೋಪಿಗಳು ದೇಶ ಬಿಟ್ಟು ಹೋಗುವಂತಿಲ್ಲ, ಸಾಕ್ಷ್ಯನಾಶ ಮಾಡುವಂತಿಲ್ಲ ಸೇರಿದಂತೆ ಮೂರು ಷರತ್ತು ವಿಧಿಸಿ ಜಾಮೀನು ನೀಡಿದೆ.