
ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ಕೇಂದ್ರ ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ಚುನಾವಣೆಗೆ ದಿನಾಂಕ ಘೋಷಿಸಿತ್ತು. ಅಂದೇ ಗುಜರಾತ್ ವಿಧಾನಸಭೆಗೂ ಚುನಾವಣೆ ಘೋಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.
ಆದರೆ ಅಂದು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಮಾತ್ರ ದಿನಾಂಕ ಘೋಷಿಸಿದ್ದು, ಹೀಗಾಗಿ ಇಂದು ನಡೆಯಲಿರುವ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.