ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುತ್ತಿರುವ ಬೆನ್ನಲ್ಲೇ ಹಲವು ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದ್ದು, ಇದೀಗ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ ಸದಾನಂದಗೌಡರು ರಾಜೀನಾಮೆ ನೀಡಿದ್ದಾರೆ. ಸದಾನಂದಗೌಡರಿಗೆ ರಾಜ್ಯ ರಾಜಕರಣದತ್ತ ಗಮನ ಹರಿಸಲು ಸೂಚಿಸಲಾಗಿದೆ ಎನ್ನಲಾಗಿದೆ.
ಅಗಲಿದ ಮೇರು ನಟ ದಿಲೀಪ್ ಕುಮಾರ್ಗೆ ಹೃದಯಸ್ಪರ್ಶಿ ನಮನ ಸಲ್ಲಿಸಿದ ಅನಿಲ್ ಕಪೂರ್
ಇನ್ನು ಸದಾನಂದಗೌಡರಿಂದ ತೆರವಾದ ಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಯ್ಕೆ ಮಾಡುವ ಸಾಧ್ಯತೆ ಇದೆ.