alex Certify BIG BREAKING: ಕೊಂಚ ಕುಸಿತ ಕಂಡ ಕೊರೊನಾ ಸೊಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊಂಚ ಕುಸಿತ ಕಂಡ ಕೊರೊನಾ ಸೊಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಆದರೆ ನಿನ್ನೆಗಿಂತ ಇಂದು ಕೊಂಚ ಕಡಿಮೆ ಪ್ರಮಾಣದಲ್ಲಿ ಕೇಸ್ ಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 12,899 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು 24 ಗಂಟೆಯಲ್ಲಿ 15 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524855 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 72,474 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8,518 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,99,363 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 13,24,591 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,96,14,88,807 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,46,387 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...