alex Certify BIG BREAKING: ಕೊರೊನಾ ಮಹಾಸ್ಫೋಟ; 2,47,417 ಜನರಲ್ಲಿ ಹೊಸದಾಗಿ ಸೊಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಮಹಾಸ್ಫೋಟ; 2,47,417 ಜನರಲ್ಲಿ ಹೊಸದಾಗಿ ಸೊಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿಯೂ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಸರಣಿ ಸ್ಫೋಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,47,417 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಶೇ.27ರಷ್ಟು ಸೋಂಕಿತರ ಪ್ರಮಾಣ ಹೆಚ್ಚಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 380 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 485035 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11,17,531 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 84,825 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, 5488 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...