alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ; ಸಾವಿನ ಸಂಖ್ಯೆಯಲ್ಲಿ ಏರಿಕೆ; 24 ಗಂಟೆಯಲ್ಲಿ 379 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ; ಸಾವಿನ ಸಂಖ್ಯೆಯಲ್ಲಿ ಏರಿಕೆ; 24 ಗಂಟೆಯಲ್ಲಿ 379 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 16,862 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,40,37,592ಕ್ಕೆ ಏರಿಕೆಯಾಗಿದೆ.

ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 379 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 451814 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 203678 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 19391 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33382100 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,80,148 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 30,26,483 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 97,14,38,553 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...