alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ 14,667 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ 14,667 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 446 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 458186 ಕ್ಕೆ ಏರಿಕೆಯಾಗಿದೆ.

ಅಪ್ಪು ಕುಟುಂಬದೊಂದಿಗೆ ನಾವೆಲ್ಲರೂ ಇದ್ದೇವೆ, ದುಡುಕಬೇಡಿ: ಅಭಿಮಾನಿಗಳಿಗೆ ಶಿವಣ್ಣ ಕಿವಿಮಾತು

ಇನ್ನು ದೇಶದಲ್ಲಿ 159272 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14667 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33655842 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,35,142 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 68,04,806 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,06,14,40,335 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...