alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ: ಸಾವಿನ ಸಂಖ್ಯೆಯಲ್ಲಿ ಏರಿಕೆ; ಒಂದೇ ದಿನದಲ್ಲಿ 493 ಜನರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ: ಸಾವಿನ ಸಂಖ್ಯೆಯಲ್ಲಿ ಏರಿಕೆ; ಒಂದೇ ದಿನದಲ್ಲಿ 493 ಜನರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 36,083 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,21,92,576ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 493 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 431225 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 385336 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37927 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31376015 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 19,23,863 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 73,50,553 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 54,38,46,290 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...