alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಸ್ಫೋಟಗೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆ ಕೊರೊನಾ ಮಹಾಮಾರಿ ಅಟ್ಟಹಾಸ ಕೊಂಚ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,563 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಕುಸಿತ ಕಂಡುಬಂದಿದ್ದು, 24 ಗಂಟೆಯಲ್ಲಿ 132 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 477554 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 82267 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8077 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34187017 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 8,77,055 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 15,82,079 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,37,67,20,359 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...