alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ; ಕ್ರಿಸ್ ಮಸ್ – ಹೊಸ ವರ್ಷಾಚರಣೆ ನಡುವೆಯೆ ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ; ಕ್ರಿಸ್ ಮಸ್ – ಹೊಸ ವರ್ಷಾಚರಣೆ ನಡುವೆಯೆ ಹೆಚ್ಚಿದ ಆತಂಕ

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಅಟ್ಟಹಾಸ ಹೆಚ್ಚುತ್ತಿದ್ದರೆ ಮತ್ತೊಂದೆಡೆ ಕೋವಿಡ್ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7,495 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಒಂದೇ ದಿನದಲ್ಲಿ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 434 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 478759 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 78291 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6960 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34208926 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,05,775 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 70,17,671 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,39,69,76,774 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...