
ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ನಿನ್ನೆಗೆ ಹೋಲಿಸಿದರೆ ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 235 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,344 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1,81,075 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 34,226 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,58,510 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 35,50,868 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,83,27,441 ಡೋಸ್ ಲಸಿಕೆ ಹಾಕಲಾಗಿದೆ.
