alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಕುಸಿತ; ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಕುಸಿತ; ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 13,405 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಮೂರನೇ ಅಲೆ ಅತಿ ವೇಗವಾಗಿ ಕಡಿಮೆಯಾಗುತ್ತಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದ್ದು, ನಿನ್ನೆಗೆ ಹೋಲಿಸಿದರೆ ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 235 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,344 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,81,075 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 34,226 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,58,510 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 35,50,868 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,83,27,441 ಡೋಸ್ ಲಸಿಕೆ ಹಾಕಲಾಗಿದೆ.

— ANI (@ANI) February 22, 2022

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...