alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 15,102 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 278 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,622 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1‌,64,522  ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31,377 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,89,887 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 33,84,744 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,76,19,39,020 ಡೋಸ್ ಲಸಿಕೆ ಹಾಕಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...