ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದೂ ಕೂಡಾ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 861 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ತೀವ್ರ ಕುಸಿತ ಕಂಡಿದ್ದು, 24 ಗಂಟೆಯಲ್ಲಿ 6 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,691 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 11,058 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 929 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,03,383 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 2,44,870 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,85,74,18,827 ಡೋಸ್ ಲಸಿಕೆ ಹಾಕಲಾಗಿದೆ.