ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 949 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಏರಿಕೆಯಾಗಿದ್ದು, 24 ಗಂಟೆಯಲ್ಲಿ 6 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,743 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 11,191 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 810 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,07,038 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 6,66,660 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,86,30,62,546 ಡೋಸ್ ಲಸಿಕೆ ಹಾಕಲಾಗಿದೆ.