ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,022 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು 24 ಗಂಟೆಯಲ್ಲಿ 46 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524413 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 14832 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2099 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42599102 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 8,81,668 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,92,38,45,615 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 2,94,812 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.