ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಕಾಏಕಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,793 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ 27 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,047 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 96,700 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 9,486 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,27,97,092 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 19,21,811 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,31,43,196 ಡೋಸ್ ಲಸಿಕೆ ಹಾಕಲಾಗಿದೆ.