alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ಮಳೆಯ ಅಬ್ಬರದ ನಡುವೆ ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 16,103 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ಇಂದು ಸೋಂಕಿತರ ಸಂಖ್ಯೆ ದಾಖಲಾಗಿದೆ.

ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 31 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,199ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,11,711 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13,929 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,65,519 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 10,10,652 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,95,72,963 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,76,720 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...