alex Certify BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 509 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 509 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಆತಂಕ ಎದುರಾಗಿದೆ. ಕಳೆದ 24 ಗಂಟೆಯಲ್ಲಿ 46,759 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 509 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 437370ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 359775 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31374 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31852802 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,61,110 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 1,03,35,290 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 62,29,89,134 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...